ಪಂಜ: ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ದಿ.ಪದ್ಮನಾಭ ಬಿಳಿಮಲೆಯವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಬಿಳಿಮಲೆ ಮನೆಯಲ್ಲಿ ನಡೆಯಿತು. ನುಡಿನಮನವನ್ನು ಹಿರಿಯ ಸಹಕಾರಿ ಜಾಕೆ ಮಾಧವ ಗೌಡ ಹಾಗೂ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಸಲ್ಲಿಸಿದರು. ಮೃತರ ಸಹೋದರ ಕರ್ನಾಟಕ ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ಇನ್ನೋರ್ವ ಸಹೋದರ ಪರಮೇಶ್ವರ ಬಿಳಿಮಲೆ ವಂದಿಸಿದರು.
ಪಂಜ ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಇದರ ವತಿಯಿಂದ ದಿ.ಪ್ರೊ.ಪದ್ಮನಾಭ ಗೌಡ ಬಿಳಿಮಲೆ ಅವರಿಗೆ
ನುಡಿನಮನ ಕಾರ್ಯಕ್ರಮಪಂಜ ಶ್ರೀ ಶಾರದಾಂಭ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ನಡೆಯಿತು.ಹಿರಿಯ ಸಹಕಾರಿ ಜಾಕೆ
ಮಾಧವ ಗೌಡ,ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ಆನಂದ ಗೌಡ ಜಳಕದಹೊಳೆ ಸಭಾಧ್ಯಕ್ಷತೆ ವಹಿಸಿದ್ದರು.ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್,ಯಕ್ಷಗಾನ ಕಲಾ ಸೇವಾ ಟ್ರಸ್ಟ್ನ

ಅಧ್ಯಕ್ಷ ಬಾಲಕೃಷ್ಣ ಪುತ್ಯ, ಶ್ರೀ ಶಾರದಾಂಬ ಭಜನಾ ಮಂಡಳಿ ಉಪಾಧ್ಯಕ್ಷ ಮತ್ತು ದಿ.ಪದ್ಮನಾಭ ಬಿಳಿಮಲೆರವರ ಸಹೋದರ ಪರಮೇಶ್ವರ ಬಿಳಿಮಲೆ ನುಡಿನಮನ ಸಲ್ಲಿಸಿದರು.ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಉಪಾಧ್ಯಕ್ಷ ತಿಮ್ಮಪ್ಪ ಗೌಡ ಕೂತ್ಕುಂಜ, ಯಕ್ಷಗಾನ ನಾಟ್ಯ ಗುರು ಗಿರೀಶ್ ಗಡಿಕಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಗಿರೀಶ್ ಗಡಿಕಲ್ಲು ಸ್ವಾಗತಿಸಿದರು. ಶ್ರೀ ಶಾರದಾಂಬ ಭಜನಾ ಮಂಡಳಿ ಕಾರ್ಯದರ್ಶಿ ಗುರುಪ್ರಸಾದ್ ತೋಟ ಪ್ರಾಸ್ತಾವಿಕ ಮಾತನಾಡಿದರು.ಬಾಲಕೃಷ್ಣ ಪುತ್ಯ ವಂದಿಸಿದರು.

















