ಸುಳ್ಯ:ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಸೃಜನಾದಿತ್ಯಶೀಲ ಕೆ. 625ರಲ್ಲಿ 624 ಅಂಕ ಪಡೆದು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಶಿಕ್ಷಕ ಡಾ.ಸುಂದರ ಕೇನಾಜೆ ಹಾಗು
ಎಲಿಮಲೆ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ರಾಜೇಶ್ವರಿ ದಂಪತಿಗಳ ಪುತ್ರ ಸೃಜನಾದಿತ್ಯಶೀಲ.
ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.85.53 ಫಲಿತಾಂಶ ಬಂದಿದೆ. 195 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 37 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 116 ಮಂದಿ ಪ್ರಥಮ ಶ್ರೇಣಿಯಲ್ಲಿ, 30 ಮಂದಿ ದ್ವಿತೀಯ ಶ್ರೇಣಿಯಲ್ಲಿ 12 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾದರು. ಸೃಜನಾದಿತ್ಯಶೀಲ 624, ಅನನ್ಯ ಕೆ.618, ವಫಾ 607, ಶಿಖಾ ಎನ್.ಎಸ್.604 a
ಅಂಕ ಗಳಿಸಿದ್ದಾರೆ.





