ಸುಳ್ಯ:ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇವರ ವತಿಯಿಂದ ಕುರುಂಜಿಗುಡ್ಡೆಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.ಪಂದ್ಯಾಟದಲ್ಲಿ
ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಚಿಂತನ್ ಕೆ.ಎ., ಆಶ್ರಿತ್ ಬಿ.ಎಸ್.,ಫಹೀಮ್ ಮೊಹಮ್ಮದ್ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಅಬ್ದುಲ್ ರಿಫಾತ್ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಅರ್ಥಶಾಸ್ತ್ರ ಉಪನ್ಯಾಸಕರಾದ ರಾಜೇಶ್ ಜೆ.ಕೆ. ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಅಕ್ಷತಾ ಅವರು ಮಾರ್ಗದರ್ಶನ ನೀಡಿದ್ದರು.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್. ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.








