ಸುಳ್ಯ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಸುಳ್ಯ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಅಮೃತಭವನದಲ್ಲಿ ನಡೆಯುತ್ತಿರುವ

ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ನಿರ್ದೇಶಕರಾದ ಡಾ.ಸಾಯಿ ಗೀತಾ ಜ್ಞಾನೇಶ್ ಜ್ಯೋತಿ ಬೆಳಗಿಸಿ ಪಂದ್ಯಾಟವನ್ನು ಉದ್ಘಾಟಿಸಿದರು. ತಾಲೂಕು ಕ್ರೀಡಾ ಸಂಯೋಜಕರಾದ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕಿ ಶಾಂತಿ, ಶ್ರೀ ಶಾರದಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಭಾರತಿ. ಪಿ ಶುಭ ಹಾರೈಸಿದರು. ಶ್ರೀ ಶಾರದಾ ಪದವಿಪೂರ್ವ ಕೇಜಿನ ಪ್ರಾಂಶುಪಾಲರಾದ ದಯಾಮಣಿ. ಕೆ ಸ್ವಾಗತಿಸಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ನಿತೇಶ್ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ ಎನ್ ಕಾರ್ಯಕ್ರಮ ನಿರೂಪಿಸಿದರು.












