ಸುಳ್ಯ:ಸುಳ್ಯ ಪೋಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸರಸ್ವತಿ ಬಿ.ಟಿ. ಅವರಿಗೆ ವರ್ಗಾವಣೆಯಾಗಿದೆ. ಬೆಂಗಳೂರಿನ ಅರಣ್ಯ ಸಂಚಾರಿ ಘಟಕಕ್ಕೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ತನಿಖಾ ವಿಭಾಗದಲ್ಲಿ ಎಸ್ಐ ಆಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರೊಬೇಷನರಿ ಅವಧಿ ಸೇರಿದಂತೆ ಸುಮಾರು ನಾಲ್ಕು ವರ್ಷಗಳ ಕಾಲ ಅವರು ಸುಳ್ಯ ಪೊಲೀಸ್ ಠಾಣೆಯಲ್ಲಿ ಅವರು ಸೇವೆ ಸಲ್ಲಿಸಿದ್ದರು.









