ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.ಹೈಕಮಾಂಡ್ ಆದೇಶದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ
ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿದೆ.ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭೆ ಆಫರ್ ಅನ್ನು ಕೂಡ ಸಿದ್ದರಾಮಯ್ಯ ತಿರಸ್ಕರಿಸಿದ್ದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಆದೇಶ ಹೊರಡಿಸಿದ್ದಾರೆ. ಈ ಕಾರ್ಯಕಾರಿ ಸಮಿತಿ ಪಕ್ಷದ ಪ್ರಮುಖ ರಾಜಕೀಯ ಕಾರ್ಯತಂತ್ರಗಳ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಮಹತ್ವದ ಸಮಿತಿಯಾಗಿದೆ.














