ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು, ಇಂದು ರಾಹುಲ್ ಗಾಂಧಿ ಹಾಗು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.ಈಗಾಗಲೇ
ರಾಜ್ಯಸಭಾ ಸ್ಥಾನವನ್ನುವ ನಿರಾಕರಿಸಿರುವ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕತ್ವದೊಂದಿಗೆ ತಮ್ಮ ಮುಂದಿನ ಭವಿಷ್ಯದ ಹಾದಿಯ ಕುರಿತು ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಭೇಟಿಯು ಮಹತ್ವದ್ದಾಗಿದೆ ತಾವು ರಾಜ್ಯ ರಾಜಕಾರಣದಲ್ಲೇ ಉಳಿಯುವುದಾಗಿ ಹೇಳಿರುವ ಸಿದ್ದರಾಮಯ್ಯ, ರಾಷ್ಟ್ರರಾಜಕಾರಣದಲ್ಲಿ ತಮಗೆ ಆಸಕ್ತಿಯಿಲ್ಲ ಎಂದು ಹೇಳಿದ್ದರು. ರಾಜ್ಯಸಭಾ ಸದಸ್ಯರಾಗಿ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಅವರಿಗೆ ಹೈಕಮಾಂಡ್ ಆಫರ್ ನೀಡಿತ್ತು.















