ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎರಡನೇ
ಬಾರಿಗೆ ಅವರು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ ಸಂಪುಟ ದರ್ಜೆ ಸಚಿವರಾಗಿ ಡಾ. ಜಿ. ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ. ಜಾರ್ಜ್,ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಗಣ್ಯಾತಿ, ಗಣ್ಯರು ಭಾಗಿಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ
ಎಐಸಿಸಿ ನಾಯಕ ರಾಹುಲ್ ಗಾಂಧಿ, ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬಿಹಾರ ಸಿಎಂ ನಿತೀಶ್ ಕುಮಾರ್, ಚತ್ತೀಸ್ಗಡ ಸಿಎಂ ಭೂಪೇಶ್ ಬಫೇಲ್, ಹಿಮಾಚಲ ಪ್ರದೇಶ ಸಿಎಂ ಸುಖೀಂದರ್ ಸಿಂಗ್, ಪುದುಚೇರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಮುಖಂಡರಾದ ಶರದ್ ಪವಾರ್, ಸೀತಾರಾಮ ಯೆಚ್ಚೂರಿ, ಎ.ರಾಜಾ, ಕೆ.ಸಿ.ವೇಣುಗೋಪಾಲ್, ತೇಜಸ್ವಿ ಯಾದವ್, ಕಮಲಾಸನ್, ಫರೂಕ್ ಅಬ್ದುಲ್ ಮತ್ತಿತರರು ಉಪಸ್ಥಿತರಿದ್ದರು.