ಗ್ಯಾಂಗ್ಟಕ್: ಸಿಕ್ಕಿಂನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮವಾಗಿ ತೀಸ್ತಾ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು 23 ಯೋಧರು ನಾಪತ್ತೆಯಾಗಿದ್ದಾರೆ. ಇವರ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗಿದೆ ಎಂದು ಸೇನೆ ತಿಳಿಸಿದೆ. ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿರುವುದರಿಂದ ನೀರಿನ ಮಟ್ಟವು 15-20 ಅಡಿ ಹಠಾತ್ ಹೆಚ್ಚಳಕ್ಕೆ ಕಾರಣವಾಗಿದೆ. ಇದು ಸಿಂಗ್ಟಾಮ್ ಬಳಿಯ ಬರ್ದಂಗ್ನಲ್ಲಿ ನಿಲ್ಲಿಸಿದ್ದ
ಸೇನಾ ವಾಹನಗಳಿಗೆ ಪರಿಣಾಮ ಬೀರಿದ್ದು, 23 ಸಿಬ್ಬಂದಿ ಕಾಣೆಯಾಗಿದ್ದಾರೆ. ಕೆಲವು ವಾಹನಗಳು ಕೆಸರಿನಲ್ಲಿ ಮುಳುಗಿವೆ, ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಎಂದು ಹೇಳಿದೆ.ರಾತ್ರಿಯಿಡೀ ಭಾರಿ ಮಳೆಯಾದ ಪರಿಣಾಮ ಉತ್ತರ ಸಿಕ್ಕಿಂನಲ್ಲಿರುವ ಲೊನಾಕ್ ಸರೋವರದ
![](https://thesulliamirror.com/wp-content/uploads/2023/10/IMG_20231004_103839.jpg)
ಬಳಿ ಮೇಘಸ್ಫೋಟ ಸಂಭವಿಸಿದೆ. ಹೀಗಾಗಿ ಸಿಕ್ಕಿಂ ಆಡಳಿತ ನಿವಾಸಿಗಳಿಗೆ ಹೈ ಅಲರ್ಟ್ ನೀಡಿದೆ. ಸಿಬ್ಬಂದಿಯ ವಾಹನಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿವೆ,
ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದಲ್ಲಿ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ, ತೀಸ್ತಾ ನದಿಯ ನೀರಿನ ಮಟ್ಟ ಹೆಚ್ಚಾಗಲು ಇದು ಕಾರಣವಾಗಿದೆ. ಅಷ್ಟೇ ಅಲ್ಲದೆ ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದು, ಇನ್ನಷ್ಟು ನೀರು ತುಂಬಲು ಕಾರಣವಾಗಿದೆ ಎಂದು ವರದಿಯಾಗಿದೆ.