ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು, ತಾಲೂಕು ಸಮಿತಿ ಸುಳ್ಯ ಮತ್ತು ಕಡಬ ಶಿಕ್ಷಕರ ಸಮಾವೇಶ ಮತ್ತು ಶೈಕ್ಷಣಿಕ ಕಾರ್ಯಗಾರ ಸಮಿತಿ ಕುಕ್ಕೆ ಸುಬ್ರಹ್ಮಣ್ಯ, ಇವರ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರ ಸಮಾವೇಶ ಮತ್ತು ಶೈಕ್ಷಣಿಕ ಕಾರ್ಯಾಗಾರ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಿತು. ಮೀನುಗಾರಿಕೆ,

ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಉದ್ಘಾಟಿಸಿದರು. ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸೀತಾರಾಮ ರೈ ಸವಣೂರು ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಸಮಗ್ರ ಶಿಕ್ಷಣ ಜಂಟಿ ನಿರ್ದೇಶಕ ಶಿವರಾಮಯ್ಯ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ರಾಜ್ಯ ಶಿಕ್ಷಣ ಸಚಿವರ ಕರ್ತವ್ಯಾಧಿಕಾರಿ ಡಾ.ಚಂದ್ರಶೇಖರ,ಸುಳ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ, ಸಮಾವೇಶ ಸಮಿತಿಯ ಸಂಚಾಲಕ ರಾಮಕೃಷ್ಣ ಮಲ್ಲಾರ ಸಮಿತಿಯ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸಚಿವ ಎಸ್..ಅಂಗಾರ ಅರನ್ನು ಸನ್ಮಾನಿಸಲಾಯಿತು.