ಸುಳ್ಯ:ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆರಂಭವಾಗಿ 25 ವರ್ಷ ಪೂರ್ಣಗೊಳಿಸಿದ ನೆನಪಿಗಾಗಿ ಜು.19 ರಂದು ಬೆಳ್ಳಿ ಹಬ್ಬ ಸಮಾರಂಭ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಜೂ.21 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಮಂತ್ರಣ ಪತ್ರಿಕೆಯನ್ನು
ಬಿಡುಗಡೆಗೊಳಿಸಿ ಶುಭಹಾರೈಸಿದರು. ಬಳಿಕ ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ನಡೆಯಿತು.
ತಾಲೂಕು ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಗಂಗಾಧರ ಮಟ್ಟಿ, ಜಿಲ್ಲಾ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ವೇದಿಕೆಯಲ್ಲಿ ಇದ್ದರು.
ಬೆಳ್ಳಿ ಹಬ್ಬಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ದಯಾನಂದ ಕೊರತ್ತೋಡಿ ಸ್ವಾಗತಿಸಿದರು. ತಾಲೂಕು ಸಂಘದ ಕೋಶಾಧಿಕಾರಿ ದಯಾನಂದ ಕಲ್ನಾರ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ ಕಾರ್ಯಕ್ರಮ ನಿರೂಪಿಸಿದರು.