ಸುಳ್ಯ:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.30 ರಿಂದ ಆರಂಭಗೊಂಡಿದೆ.ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿಯೂ ಎಸ್ಐಆರ್ ಪ್ರಕ್ರಿಯೆ ಬಿರುಸಿನಿಂದ ನಡೆಯುತಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು
2,08,487 ಮತದಾರರಿದ್ದಾರೆ. ಜುಲೈ 8ರ ತನಕ 1,93,344 ಗಣತಿ ನಮೂನೆಗಳನ್ನು (ಎನ್ಯುಮರೇಷನ್ ಫಾರ್ಮ್) ಹಂಚಿಕೆ ಮಾಡಲಾಗಿದೆ. 4342 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ಗಣತಿ ನಮೂನೆಗಳನ್ನು ಮತದಾರರಿಗೆ ನೀಡುತ್ತಾರೆ. ಈ ನಮೂನೆಯಲ್ಲಿ ಭರ್ತಿ ಮಾಡಿ ಪಡೆದು ಡಿಜಿಟೈಸ್ ಮಾಡಲಾಗುತ್ತದೆ. ಜುಲೈ 29ರವರೆಗೆ ಮನೆ ಮನೆ ಭೇಟಿ ನಡೆಯಲಿದೆ. ಆಗಸ್ಟ್ 5 ರಂದು ಮತದಾರರ ಕರಡು ಪಟ್ಟಿ ಪ್ರಕಟವಾಗಲಿದೆ. ಮತದಾರರ ಕ್ಲೈಮ್ ಮತ ಆಕ್ಷೇಪಣೆಗಳಿದ್ದರೆ ಆಗಸ್ಟ್ 5 ರಿಂದ ಸೆಪ್ಟೆಂಬರ್ 4 ರವರೆಗೆ ನೀಡಬಹುದು. ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.







