ಸುಳ್ಯ:ಎಸ್ಐಆರ್ ಪ್ರಕ್ರಿಯೆಯ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಎಸ್ಕೆಎಸ್ಎಸ್ಎಫ್ ಸುಳ್ಯ ವಲಯ ಸಮಿತಿ ವತಿಯಿಂದ ನ.13ರಂದು ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ
ಪ್ರತಿಭಟನೆ ನಡೆಸಲಾಯಿತು.ಎಸ್ಕೆಎಸ್ಎಸ್ಎಫ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಸಿರ್ ಅರಾಫತ್,ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್, ಸುಳ್ಯ
ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ ಮತ್ತಿತರರು ಮಾತನಾಡಿದರು.
ಎಸ್ಕೆಎಸ್ಎಸ್ಎಫ್ ಸುಳ್ಯ ವಲಯ ಸಮಿತಿ ಅಧ್ಯಕ್ಷ ಅಕ್ಬರ್ ಕರಾವಳಿ,ಪ್ರಧಾನ ಕಾರ್ಯದರ್ಶಿ ರಫೀಕ್ ಹನೀಫಿ ಅಜ್ಜಾವರ, ಉಪಾಧ್ಯಕ್ಷ ಅಬೂಬಕ್ಕರ್ ಪೂಪಿ ಕನಕಮಜಲು, ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಖಾದರ್ ಮೊಟ್ಟೆಂಗಾರ್,ಪ್ರಮುಖರಾದ ಶಾಫಿ ದಾರಿಮಿ, ಮೂಸಾ ಕುಂಞಿ ಪೈಂಬೆಚ್ಚಾಲ್, ಸಿದ್ದಿಕ್ ಕೊಕ್ಕೊ, ಜಮಾಲುದ್ದೀನ್ ಬೆಳ್ಳಾರೆ, ಅಮೀರ್ ಕುಕ್ಕುಂಬಳ, ಹಮೀದ್ ಹಾಜಿ, ಅಶ್ರಫ್ ಗುಂಡಿ, ಯು.ಪಿ.ಬಶೀರ್ ಬೆಳ್ಳಾರೆ, ಅಜರುದ್ದೀನ್ ಬೆಳ್ಳಾರೆ, ಶರೀಫ್ ರಿಲಾಕ್ಸ್, ತಾಜ್ ಮಹಮ್ಮದ್, ಸಿದ್ದಿಕ್ ಮೇನಾಲ, ಸಂಪಾಜೆ ಮತ್ತಿತರರು ಉಪಸ್ಥಿತರಿದ್ದರು. ಇಕ್ಬಾಲ್ ಸುಣ್ಣಮೂಲೆ ಸ್ವಾಗತಿಸಿ, ಅಬ್ದುಲ್ ಖಾದರ್ ಮೊಟ್ಟೆಂಗಾರ್, ವಂದಿಸಿದರು.
ಎಸ್ಕೆಎಸ್ಎಸ್ಎಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯದ 100 ತಾಲೂಕು ಕೇಂದ್ರಗಳಲ್ಲಿ ನಡೆದ ಪ್ರತಿಭಟನೆಯ ಅಂಗವಾಗಿ ಸುಳ್ಯದಲ್ಲಿಯೂ ಪ್ರತಿಭಟನೆ ನಡೆಯಿತು. ಎಸ್ಐಆರ್ ಅಕ್ರಮಗಳು ಮತ್ತು ಲೋಪದೋಷಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡಬಾರದು. ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿರುವ ಪ್ರಕರಣಗಳ ಕುರಿತು ಪಾರದರ್ಶಕವಾಗಿ ಮರುಪರಿಶೀಲನೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬಳಿಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.














