ಮಂಗಳೂರು:ಮಂಗಳೂರು –ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಸಮೀಪ ಹಾಸನ ಜಿಲ್ಲೆಯ ಸಕಲೇಶಪುರ ದೊಡ್ಡ ತೊಪ್ಲು ಎಂಬಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಸಿಲುಕಿಕೊಂಡಿವೆ. ತಕ್ಷಣದಿಂದ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಈ ಹೆದ್ದಾರಿಯಲ್ಲಿ
ನಿರ್ಬಂಧಿಸಲಾಗಿದೆ. ರಾಜ್ಯದಲ್ಲಿ ಸುರಿಯುವ ಭಾರೀ ಮಳೆಗೆ ಅಲ್ಲಲ್ಲಿ ಗುಡ್ಡಗಾಡುಗಳು ಕುಸಿಯುತ್ತಿವೆ. ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಚಲಿಸುತ್ತಿದ್ದ ಕಾರು ,ಲಾರಿ,ಗ್ಯಾಸ್ ಟ್ಯಾಂಕರ್ ಸಿಲುಕಿಕೊಂಡಿದೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.