ಸುಳ್ಯ: ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಮಂಗಳೂರು ಇವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ
ಪ್ರಥಮ ಸ್ಥಾನ ಪಡೆದ ಅಜ್ಜಾವರ ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್ ಅಜ್ಜಾವರ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ದ.ಕ ಜಿಲ್ಲೆಯ ವಿವಿಧ
ತಾಲೂಕು ಗಳಿಂದ ಸುಮಾರು 70ಕ್ಕು ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ್ದ ಶಶ್ಮಿ ಭಟ್ ಸಿಹಿ ಖಾದ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು. ಇವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಗೊಂಡಿರುತ್ತಾರೆ. ಚೈತ್ರ ಯುವತಿ ಮಂಡಲ ಉಪಾಧ್ಯಕ್ಷೆ ಮಾಲತಿ ಸೂರ್ಯ ಅವರು ಖಾರ ಖಾದ್ಯ ವಿಭಾಗದಲ್ಲಿ ಭಾಗವಹಿಸಿದ್ದರು. ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣೀಜ್ಯ ಮೇಳ-2025ರ ಪ್ರಯುಕ್ತ ಜಿಲ್ಲಾ ಮಟ್ಟದ ಸ್ಪರ್ಧೆ ಏರ್ಪಡಿಸಲಾಗಿತ್ತು.