ಸುಳ್ಯ:ಆಲೆಟ್ಟಿ ಗ್ರಾಮದ ಕಲ್ಚರ್ಪೆಯ ಸಿರಿ ಕುರಲ್ ನಗರದ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಉತ್ಸವ ಸಮಿತಿಯ ಆಶ್ರಯಲ್ಲಿ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ

ಇಂದು ನಡೆಯುತಿದೆ. ಬೆಳಿಗ್ಗೆ ಸ್ಥಳ ಶುದ್ದಿ, ಗಣಹೋಮ, ವನದುರ್ಗಾ ಹೋಮ, ಆಶ್ಲೇಷ ಬಲಿ,ತಂಬಿಲ ಸೇವೆ ನಡೆಯಿತು. ಕ್ಷೇತ್ರ ಸನ್ನಿಧಿಯಲ್ಲಿ
ಬೆಳಿಗ್ಗಿನಿಂದ ನಿರಂತರ ಭಜನಾ ಕಾರ್ಯಕ್ರಮ ನಡೆಯುತಿದ್ದು ಸಂಜೆಯ ತನಕ ನಡೆಯಲಿದೆ. ಸಂಜೆ 4ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ರಿಂದ ಗುಳಿಗ ದೈವದ ನೇಮ ನಡೆಯಲಿದೆ. ರಾತ್ರಿ 10ಕ್ಕೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.









