ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಹಾಗೂ ಏಕೈಕ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಗುರುವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.
ಈ ಬೆನ್ನಲ್ಲೇ ಟ್ವೀಟ್ ಮಾಡಿರುವ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ”ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ” ಎಂದು ಭರವಸೆ ನೀಡಿದ್ದಾರೆ.