ಸುಳ್ಯ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು ವತಿಯಿಂದ ಜ್ಞಾನದೀಪ ಗೌರವ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಸುಳ್ಯದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಆ.11ರಂದು ನಡೆಯಿತು. 2026-27ನೇ ಸಾಲಿನಲ್ಲಿ 12 ಶಾಲೆಗಳಿಗೆ 12 ಮಂದಿ ಜ್ಞಾನದೀಪ ಗೌರವ ಶಿಕ್ಷಕರನ್ನು
ನೇಮಕ ಮಾಡಿ ಮಂಜೂರಾತಿ ಪತ್ರ ವಿತರಿಸಲಾಯಿತು. ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್, ಸುಳ್ಯ ಯೋಜನಾಧಿಕಾರಿ ಮಾಧವ ಗೌಡ, ಜನಜಾಗೃತಿ ವೇದಿಕೆಯ

ತಾಲೂಕು ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಮಾಜಿ ಅಧ್ಯಕ್ಷರಾದ ಲೋಕನಾಥ್ ಅಮೆಚೂರು, ಭವಾನಿಶಂಕರ ಅಡ್ತಲೆ, ಮಹೇಶ್ ಕುಮಾರ್ ಮೇನಾಲ, ವಲಯಾಧ್ಯಕ್ಷರಾದ ಭಾಸ್ಕರ ಅಡ್ಕಾರ್, ವಿಜಯಕುಮಾರ್ ಉಬರಡ್ಕ, ಮಾಜಿ ವಲಯಾಧ್ಯಕ್ಷ ಪದ್ಮನಾಭ ಶೆಟ್ಟಿ,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಬೂಡು ರಾಧಾಕೃಷ್ಣ ರೈ,ಉದ್ಯಮಿ ಅಶೋಕ್ ಪ್ರಭು,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷ ಮನೋಹರ, ಸವಿತಾ ಸಂದೇಶ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ನ ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪುಷ್ಪಲತಾ ವಂದಿಸಿದರು. ದಿವ್ಯ ಕಾರ್ಯಕ್ರಮ ನಿರೂಪಿಸಿದರು.





























