ದೇವಚಳ್ಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಅವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ
ಮಾತನಾಡಿದ ಅವರು ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಯೋಜನೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ, ಮೂಲಸೌಕರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಯಾನಂದ ಪಟ್ಟೆ, ಶತಮಾನೋತ್ಸವ ಸಮಿತಿ ಅಧ್ಯಕ ಎ.ವಿ.ತೀರ್ಥರಾಮ, ಗುತ್ತಿಗಾರು ಜನ ಜಾಗೃತಿ ವಲಯ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟಗಳ ವಲಯ ಅಧ್ಯಕ್ಷ ಯೋಗೀಶ್ ದೇವ, ತಾಲೂಕು ಜನಜಾಗೃತಿ ಸದಸ್ಯರಾದ ಬಾಬು ಗೌಡ ಅಚ್ರಪ್ಪಾಡಿ, ಶಾಲಾ ಮುಖ್ಯ ಗುರುಗಳಾದ ಶ್ರೀಧರ ಗೌಡ, ಮಾವಿನಕಟ್ಟೆ ಒಕ್ಕೂಟದ ಅಧ್ಯಕ್ಷರಾದ ಭಾನುಪ್ರಕಾಶ್ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಉಷಾಲತಾ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ಮಕ್ಕಳ ಪೋಷಕರು, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು. ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಸ್ವಾಗತಿಸಿ, ಶಾಲಾ ಮುಖ್ಯ ಗುರುಗಳಾದ ಶ್ರೀಧರ ಗೌಡ ವಂದಿಸಿದರು.