ಸುಳ್ಯ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾ ಕಚೇರಿಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಸೆ.28ರಂದು ನಡೆಯಿತು. ಜನಜಾಗೃತಿ ವೇದಿಕೆಯ
ತಾಲೂಕು ಅಧ್ಯಕ್ಷ ಲೋಕನಾಥ ಅಮೆಚೂರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ, ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ಪ್ರಮುಖರಾದ ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್, ಪದ್ಮಯ್ಯ ಸಿ.ಎಚ್, ಭವಾನಿಶಂಕರ ಅಡ್ತಲೆ, ಸತೀಶ್ ಟಿ.ಎನ್, ನಾರಾಯಣ ಕೇಕಡ್ಕ, ಬೂಡು ರಾಧಾಕೃಷ್ಣ, ಸುನಿಲ್ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.







