ಸುಳ್ಯ:ಮಂಗಳೂರಿನಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿದ್ದೋಧ್ಧೇಶ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸುಳ್ಯ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷರಾದ ಕರುಣಾಕರ ಎಣ್ಣೆಮಜಲು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಪ್ರಧಾನ ಕಛೇರಿ ಮಂಗಳೂರು ಹಾಗೂ
ಉಡುಪಿಯಲ್ಲಿ ತಮ್ಮ ಶಾಖೆಯನ್ನು ಹೊಂದಿರುವ ಸಹಕಾರಿ ಸಂಘದಲ್ಲಿ ಕಳೆದ ಹತ್ತು ವರ್ಷಗಳಿಂದ ಛಾಯಾಗ್ರಾಹಕರು ಮತ್ತು ಸಾರ್ವಜನಿಕರಿಗೆ ಕ್ಯಾಮರಾ ಖರೀದಿ, ವಾಹನ ಖರೀದಿ, ಗೃಹ ನಿರ್ಮಾಣ ಸಾಲ, ಚಿನ್ನಾಭರಣ ಸಾಲ ಹಾಗೂ ಹಲವು ಬಗೆಯ ಸಾಲ ಸೌಲಭ್ಯಗಳ ವ್ಯವಸ್ಥೆ ಇದೆ. ಉತ್ತಮ ಲಾಭಾಂಶದಲ್ಲಿರುವ ಸಹಕಾರಿ ಸಂಘವು ಕಳೆದ 2024-25ರ ಸಾಲಿನಲ್ಲಿ ಸದಸ್ಯರಿಗೆ ಶೇ. 10 ರಷ್ಟು ಡಿವಿಡೆಂಡ್ ವಿತರಿಸಿದೆ.