ಸುಳ್ಯ:ಸೃಷ್ಟಿ, ಸ್ಥಿತಿ ಮತ್ತು ಲಯವನ್ನು ಪರಿಚಯಿಸುವವರೇ ಗುರುಗಳಾಗುತ್ತಾರೆ. ಭಾರತದಲ್ಲಿ ಗುರು ಶಿಷ್ಯ ಪರಂಪರೆ ತನ್ನದೇ ಆದ ಇತಿಹಾಸವನ್ನು ಹೊಂದಿದೆ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಹೇಳಿದರು. ಅವರು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ
ಗುರು ಪೂರ್ಣಿಮೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ವೈಷ್ಣವ್ ಪಿ. ಎನ್. ಗುರುಗಳ ಮಹತ್ವದ ಕುರಿತು ಮಾತನಾಡಿದರು. ಶಾಲೆಯ ನಿರ್ವಾಕರಾದ ಜಯಲಕ್ಷ್ಮಿ ದಾಮ್ಲೆ ಮಾತನಾಡಿದರು. ವಿದ್ಯಾರ್ಥಿ ಅಪ್ರಮೇಯ ಗುರುಸ್ತುತಿಯನ್ನು ವಾಚಿಸಿದರು.ಶಾಲಾ ಮುಖ್ಯ ಶಿಕ್ಷಕ ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.









