ಸುಳ್ಯ:ಆಧುನಿಕರಣದ ಭರಾಟೆಯಲ್ಲಿ ಪರಿಸರ ನಾಶ ಸಂಭವಿಸುತ್ತಿದ್ದು ಇದು ವನ್ಯಜೀವಿಗಳ ಹಾಗೂ ಮಾನವನ ಭವಿಷ್ಯಕ್ಕೆ ಕುತ್ತು ತಂದಿದೆ ಎಂದು ಪರಿಸರವಾದಿ ದಿನೇಶ್ ಹೊಳ್ಳ ಹೇಳಿದರು.ಅವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ತಾಲೂಕು ಘಟಕದ ವತಿಯಿಂದ ನಡೆದ ಪರಿಸರ ಜಾಗೃತಿಯಾನ-ಪರಿಸರ ಗೀತೆ ಗಾಯನ ಕಾರ್ಯಕ್ರಮದಲ್ಲಿ
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಉದ್ಘಾಟಿಸಿದರು.ದ.ಕ.ಜಿಲ್ಲಾ ಕಸಾಪ ಕಾರ್ಯಕಾರಿಣಿ ಸದಸ್ಯ ರಾಮಚಂದ್ರ ಪಲ್ಲತಡ್ಕ ಮಾತನಾಡಿದರು. ಸಂಧ್ಯಾ ಮಂಡೆಕೋಲು ಕನ್ನಡ ನಾಡು ನುಡಿ ಮತ್ತು ಪರಿಸರಕ್ಕೆ ಸಂಬಂಧಿಸಿದ ಗೀತಾ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು.
ಶಾಲಾ ಆವರಣದಲ್ಲಿರುವ ಸುಮಾರು ನೂರು ಸಸಿಗಳ ಎಲೆಗಳನ್ನು ಗುರುತಿಸುವ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಪ್ರೌಢಶಾಲಾ ವಿಭಾಗದಲ್ಲಿ ವಿದ್ಯುಲತ ಪಿ ಪ್ರಥಮ, ಗಿರೀಶ ದ್ವಿತೀಯ ಬಹುಮಾನ ಪ್ರಾಥಮಿಕ ವಿಭಾಗದಲ್ಲಿ ದಿಶಾಂತ್ ಬಿ. ಜಿ ಪ್ರಥಮ,ಸಾನಿಕ ಎ. ಪಿ ದ್ವಿತೀಯ ಬಹುಮಾನ ಪಡೆದುಕೊಂಡರು.
ಕಸಾಪ ಸದಸ್ಯೆ ಶಶ್ಮಿ ಭಟ್ ಅಜ್ಜಾವರ ಉಪಸ್ಥಿತರಿದ್ದರು. ಸ್ನೇಹ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ ಸ್ವಾಗತಿಸಿ,
ತೇಜಸ್ವಿ ಕಡಪಳ ವಂದಿಸಿದರು. ದೇವಿಪ್ರಸಾದ ಜಿ. ಸಿ ಕಾಯರ್ತೋಡಿ ನಿರೂಪಿಸಿದರು.





