ಸುಳ್ಯ:ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ಸುರಕ್ಷತಾ ಅರಿವು ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಇಂಚರ ಪೌಂಡೇಶನ್ನ ಸೌಜನ್ಯ ಮಾತನಾಡಿ “ನಮ್ಮ ದೇಹದ ಸುರಕ್ಷತೆ ಬಗ್ಗೆ ನಾವು ಜಾಗ್ರತೆ ವಹಿಸಬೇಕು.ಚೈಲ್ಡ್ ಲೈನ್ ಕೇರ್ 1098 ನಂಬರ್ ಅನ್ನು
ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಬಳಸಲು ತಿಳಿದಿರಬೇಕು ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಮಾತನಾಡಿ “ಇದು ಅತ್ಯಂತ ಒಳ್ಳೆಯ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.ವೈಯಕ್ತಿಕ ರಕ್ಷಣೆಗಾಗಿ ಸದಾ ಸನ್ನದ್ಧರಾಗಿರಬೇಕು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ ಅವರು ಸ್ವಾಗತಿಸಿದರು. ಶಿಕ್ಷಕ ದೇವಿಪ್ರಸಾದ ಜಿ.ಸಿ ವಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.