ಸುಳ್ಯ:ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಪ್ರೊ. ಎಲ್ ಎಸ್ ಶೇಷಗಿರಿರಾವ್ ಅವರ ಜನ್ಮ ಶತಮಾನೋತ್ಸವ ಸಂಸ್ಮರಣೆ ಹಾಗೂ ಮಹಿಳಾ ದಿನಾಚರಣೆ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ ಮಾತನಾಡಿ ಕನ್ನಡ ಸಾಹಿತ್ಯಕ್ಕೆ ವಿಮರ್ಶಾ ಗ್ರಂಥಗಳನ್ನು ಕೊಡುಗೆಯಾಗಿ ನೀಡಿದವರು ಎಲ್ ಎಸ್ ಶೇಷಗಿರಿ ರಾವ್. ಅವರು ಕನ್ನಡ ಸಾಹಿತ್ಯದಲ್ಲಿ ಹಲವಾರು
ಕೃತಿಗಳನ್ನು ರಚಿಸಿದ್ದಾರೆ. ಮಾತೃಭಾಷೆಗೆ ಪ್ರಾಧಾನ್ಯತೆ ನೀಡಿದ ಎಲ್ . ಎಸ್. ಎಸ್ ಅವರು ಕನ್ನಡ ಮಾಧ್ಯಮದ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಯವರು ಮಾತನಾಡಿ ಪ್ರೊ. ಎಲ್ ಎಸ್ ಶೇಷಗಿರಿ ರಾವ್ ಅವರು ಸರಳ ಜೀವನವನ್ನು ನಡೆಸಿದ ಕಾರಣ ತಮ್ಮ ಉಳಿತಾಯದಲ್ಲಿ ಇಂದೂ ಸಹ ದತ್ತಿ ನಿಧಿಗಳನ್ನು ಸ್ಥಾಪಿಸಿ ಬಡ ವಿದ್ಯಾರ್ಥಿಗಳನ್ನು ಪೋಷಿಸುತ್ತಿದ್ದಾರೆ. ಕನ್ನಡ ಕಲಿಯುವ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸಹಕರಿಸುತ್ತಿದ್ದಾರೆ. ಅವರ ಸರಳ ಸಜ್ಜನ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ ಎಂದರು. ಮಹಿಳಾ ದಿನಾಚರಣೆಯ ಮಹತ್ವದ ಬಗ್ಗೆಶಿಕ್ಷಕಿ ಚೈತ್ರಶ್ರೀ ಮಾತನಾಡಿದರು.
ಮುಖ್ಯೋಪಾಧ್ಯಾಯಿನಿಸ್ವಾಗತಿ ಜಯಲಕ್ಮೀ ದಾಮ್ಲೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಶಿಕ್ಷಕಿ ಸವಿತಾ ಎಂ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ. ಸಿ ನಿರೂಪಿಸಿದರು .