ಸುಳ್ಯ: ಯೋಗವು ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುತ್ತದೆ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆ ಅವರು ಹೇಳಿದರು. ಇವರು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ
ನಡೆದ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಬಯಲು ಸೂರ್ಯಾಲಯದಲ್ಲಿ
ಸಾಮೂಹಿಕ ಯೋಗಾಸನ, ಸೂರ್ಯ ನಮಸ್ಕಾರ ಮಾಡಲಾಯಿತು.
ಶಾಲೆಯ ಮಾಜಿ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ ಮಾತನಾಡಿ ಯೋಗದ ಮಹತ್ವದ ಬಗ್ಗೆ ವಿವರಿಸಿದರು.ಶಾಲಾ ಮುಖ್ಯ ಶಿಕ್ಷಕ ದೇವಿಪ್ರಸಾದ್ ಜಿ.ಸಿ.ಮತ್ತು ಶಿಕ್ಷಕರು ಉಪಸಿತರಿದ್ದರು.







