ಸುಳ್ಯ: ಸುಳ್ಯ ಎಸ್ಐ ಈರಯ್ಯ ದೂಂತೂರು ಅವರಿಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಬೆಳ್ಳಾರೆ ಎಸ್ಐ ಸಂತೋಷ್ ಬಿ.ಪಿ. ಅವರನ್ನು ಸುಳ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸುಳ್ಯ ಪೊಲೀಸ್ ಠಾಣೆಯ
ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ಎಸ್ಐ ಆಗಿದ್ದ ಈರಯ್ಯ ಡಿ.ಎನ್. ಅವರನ್ನು ಬೆಳ್ಳಾರೆ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ಎಸ್ಐ ಆಗಿ ಹಾಗೂ ಬೆಳ್ಳಾರೆ ಎಸ್ಐ ಸಂತೋಷ್ ಅವರನ್ನು ಸುಳ್ಯ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ನಿರ್ವಹಣೆ ಎಸ್ಐ ಆಗಿ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ ಎಂದು ತಿಳಿದು ಬಂದಿದೆ.