ಸುಳ್ಯ:ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿತಾಗಿ ಪೋಸ್ಟ್ ಹಾಕರುವ ಘಟನೆಯನ್ನು ಬಿಜೆಪಿ ಮುಖಂಡರು ಖಂಡಿಸಿದ್ದಾರೆ. ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ರಬ್ಬರ್ ಮಂಡಳಿಯ ನಿರ್ದೇಶಕ ಮುಳಿಯ ಕೇಶವ ಭಟ್, ಬಿಜೆಪಿ ಸಾಮಾಜಿಕ ಜಾಲತಾಣ ಪ್ರಮುಖ ಪ್ರಸಾದ್ ಕಾಟೂರು,ಆದಿ ದ್ರಾವಿಡ ಸಮಾಜ ಸೇವಾ ಸಂಘದ ಪ್ರಮುಖರು ಸೇರಿ ಹಲವು ಮಂದಿ ಖಂಡಿಸಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದವರ ವಿರುದ್ಧ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹರೀಶ್ ಕಂಜಿಪಿಲಿ ಹೇಳಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ಟೀಕೆಗಳು ಸಹಜ, ಪೂರ್ವಾಗ್ರಹ ಪೀಡಿತ ಮತ್ತು ಸಂಸ್ಕಾರವಿಲ್ಲದ, ಕೀಳು ಮಟ್ಟದ ಟೀಕೆಗಳನ್ನು ನಾಗರಿಕ ಸಮಾಜ ಎಂದಿಗೂ ಒಪ್ಪಲು ಸಾಧ್ಯವಿಲ್ಲ. ಈ ವಿಷಯದಲ್ಲಿ ಪೋಲಿಸ್ ಇಲಾಖೆ ಸುಮೋಟು ಕೇಸ್ ದಾಖಲು ಮಾಡಬೇಕು ಎಂದು ಮುಳಿಯ ಕೇಶವ ಭಟ್ ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ವ್ಯಕ್ತಿಯ ವಿರುದ್ಧ ಕೂಡಲೇ ಕ್ರಮ ವಹಿಸಬೇಕು ಎಂದು ಜಿಲ್ಲಾ ಸಾಮಾಜಿಕ ಜಾಲಾತಾಣ ಪ್ರಕೋಷ್ಠದ ಸದಸ್ಯ ಪ್ರಸಾದ್ ಕಾಟೂರು ಆಗ್ರಹಿಸಿದ್ದಾರೆ.
ಘಟನೆಯನ್ನು ಖಂಡಿಸಿ,ಪೊಸ್ಟ್ ಮಾಡಿರುವ ವ್ಯಕ್ತಿ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸುಳ್ಯ ತಾಲೂಕು ಆದಿ ದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ತಾಲೂಕು ಅಧ್ಯಕ್ಷ ಬಾಲಕೃಷ್ಣ ದೊಡ್ಡೇರಿ ಮತ್ತು ಆದಿ ದ್ರಾವಿಡ ಯುವ ಸಮಾಜ ಸೇವಾ ಸಂಘ ಸುಳ್ಯ ತಾಲೂಕು ಅಧ್ಯಕ್ಷ ಸತೀಶ್ ಬೂಡುಮಕ್ಕಿ ಸುಳ್ಯ ಪೋಲೀಸ್ ಉಪ ನಿರೀಕ್ಷಕರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ,ತಾಹಶೀಲ್ದಾರ್ ಅವರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಚನಿಯ ಕಲ್ತಡ್ಕ, ಬಾಬು ಜಾಲ್ಸೂರು, ವಿಜಯ ಆಲಡ್ಕ,ಗಿರೀಶ್ ಮಡಪ್ಪಾಡಿ ಇದ್ದರು.












