ಸುಬ್ರಹ್ಮಣ್ಯ: ದ.ಕ.ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಸಂಘ ಮಂಗಳೂರು, ದ.ಕ.ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕೊಳಪಟ್ಟ ಎಸ್ಎಸ್ಪಿಯು ಕಾಲೇಜಿನಲ್ಲಿ ಸಮಾಜಶಾಸ್ತç ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ
ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಉದ್ಘಾಟಿಸಿದರು. ಪಿಯುಸಿ ವಾರ್ಷಿಕ ಪರೀಕ್ಷೆಯ ಸಮಾಜಶಾಸ್ತ್ರ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ನಿವೃತ್ತ ಪ್ರಾಂಶುಪಾಲ ಯೂಸುಫ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ದ.ಕ ಜಿಲ್ಲಾ ಪ್ರಾಂಶುಪಾಲ ಸಂಘದ ಅಧ್ಯಕ್ಷರಾದ ವಿಠಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರು ವಿ.ವಿಯ ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕರಾದ ಡಾ.ರವಿಶಂಕರ್ ಭಟ್, ಮಂಗಳೂರು ವಿ.ವಿಯ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ.ಅನಿತಾ ರವಿಶಂಕರ್, ಸುಬ್ರಹ್ಮಣ್ಯದ ಎಸ್ಎಸ್ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಮುಖ್ಯ ಅತಿಥಿಗಳಾಗಿದ್ದರು.ದ.ಕ.ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷ ವಸಂತ ಕುಮಾರ್.ಡಿ, ಕಾರ್ಯದರ್ಶಿ ಮಧು.ಡಿ, ಉಪಾಧ್ಯಕ್ಷ ಲಕ್ಷ್ಮೀಶ ಕೆ.ಪಿ, ಕೋಶಾಧಿಕಾರಿ ಸುಬ್ರಹ್ಮಣ್ಯ ಭಟ್.ವಿ, ಎಸ್ಎಸ್ಪಿಯು ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕಿ ಸುಧಾ ಉಪಸ್ಥಿತರಿದ್ದರು.