ಮಂಗಳೂರು:ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ

ಸುಧೀರ್ ಕುಮಾರ್ ರೆಡ್ಡಿ, ಡಾ.ಅರುಣ್ ಕೆ.
ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ ಐ ಜಿ ಆಗಿದ್ದರು. ಅವರು ವರ್ಗಾವಣೆಯಾಗಿರುವ ಅನುಪಮ್ ಅಗ್ರವಾಲ್ ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ. ಉಡುಪಿ ಎಸ್ಪಿಯಾದ್ದ ಡಾ.ಅರುಣ್ ಕೆ. ಅವರು ವರ್ಗಾವಣೆಯಾಗಿರುವ ಯತೀಶ್ ಎನ್. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.