ಸುಳ್ಯ:ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಫೆ. 21ರಂದು ಭೇಟಿ ನೀಡಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕರ್ನಾಟಕ ಸಂಭ್ರಮ-50 ಅಂಗವಾಗಿ 2024 25 ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ನೀಡಿದ
ಸ್ಮಾರ್ಟ್ ಕ್ಲಾಸ್ ರೂಮ್ ಅನ್ನು ಅವರು ವೀಕ್ಷಿಸಿದರು. ಸ್ಮಾರ್ಟ್ ಕ್ಲಾಸ್ರೂಂ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲ ಆಗುತ್ತಿರುವುದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸೋಮಣ್ಣ ಬೇವಿನಮರದ ಗಡಿ ಪ್ರದೇಶದಲ್ಲಿ ಕನ್ನಡ ಶಾಲೆಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ನಿರಂತರ ಕೆಲಸ ಮಾಡುತಿದೆ ಎಂದು ಹೇಳಿದರು. ಆರು ರಾಜ್ಯಗಳ ಗಡಿ 19 ಜಿಲ್ಲೆಗಳ 33 ತಾಲೂಕುಗಳು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುತಿದೆ. ಇಲ್ಲಿ ಕನ್ನಡ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಪ್ರಯತ್ನ ನಡೆಸುತಿದೆ ಎಂದು ಅವರು ಹೇಳಿದರು. ಹೊರ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಕನ್ನಡ ಭಾಷೆಯ ಬೆಳವಣಿಗೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿದೆ ಎಂದು ಅವರು ವಿವರಿಸಿದರು.

ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ ಸ್ಮಾರ್ಟ್ ಕ್ಲಾಸ್ ಕಾರ್ಯನಿರ್ವಹಣೆ ಕುರಿತು ವಿವರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎ.ಆರ್.ಸುಬ್ಬಯ್ಯ ಸುಬ್ಬಯ್ಯ ಕಟ್ಟೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಂ. ಶಹೀದ್ ತೆಕ್ಕಿಲ್, ಕಾವು ಹೇಮನಾಥ ಶೆಟ್ಟಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನಗರ ಪಂಚಾಯತ್ ಸದಸ್ಯರಾದ ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ, ಗಡಿನಾಡ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯಕ್, ಡಾ.ಸುಂದರ ಕೇನಾಜೆ, ಚೇತನ್ ಕಜೆಗದ್ದೆ ಮತ್ತಿತರರು ಉಪಸ್ಥಿತರಿದ್ದರು,