ನವದೆಹಲಿ:ಕೇಂದ್ರ ಸರ್ಕಾರದ ಭರವಸೆಯ ಬೆನ್ನಲ್ಲೇ ಸಾಮಾಜಿಕ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರು ತಮ್ಮ 26 ದಿನಗಳಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಗುರುವಾರ ರಾತ್ರಿ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವರಾದ
ಜೆ.ಪಿ. ನಡ್ಡಾ ಮತ್ತು ಡಾ. ಜಿತೇಂದ್ರ ಸಿಂಗ್ ಅವರು ವಾಂಗ್ಚೂಕ್ ಅವರನ್ನು ಭೇಟಿಯಾಗಿ ಸರ್ಕಾರದ ಭರವಸೆಗಳ ಕುರಿತು ಚರ್ಚಿಸಿದರು. ಇದಾದ ಬಳಿಕ ಸೊನಮ್ ಉಪವಾಸ ಕೈಬಿಟ್ಟಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸೊನಮ್, ‘ಕೇಂದ್ರ ಸಚಿವಾರದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್ ಹಾಗೂ ಲೇಹ್-ಲಡಾಖ್ನ ಹಿರಿಯ ನಾಯಕರ ಸಮ್ಮುಖದಲ್ಲಿ 26 ದಿನಗಳ ಉಪವಾಸವನ್ನು ಅಂತ್ಯಗೊಳಿಸಿದ್ದೇನೆ. ವಿವಿಧ ಷರುತ್ತಗಳ ಕುರಿತು ಸುದೀರ್ಘ ಮಾತುಕತೆಗಳ ಬಳಿಕ
ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ. ನೀಟ್ ಸೇರಿದಂತೆ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸುಧಾರಣೆಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸುವುದಾಗಿ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರವು ಭರವಸೆ ನೀಡಿದೆ. ಸೊನಮ್ ವಾಂಗ್ಚೂಕ್ ಉಪವಾಸ ಹಿಂಪಡೆದಿರುವುದು ‘ನೆಮ್ಮದಿ ಮತ್ತು ಕೃತಜ್ಞತೆ ತಂದಿದೆ’ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಕ್ರಿಯಿಸಿದೆ. ಆದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.







































