ಸುಳ್ಯ: ಸೋಣಂಗೇರಿ ಬೇಂಗಮಲೆ ರಸ್ತೆ ಅಗಲೀಕರಣ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಕಾಮಗಾರಿಯನ್ನು ವೀಕ್ಷಿಸಿದ ಶಾಸಕಿ ಭಾಗೀರಥಿ ಮುರುಳ್ಯ ಕಾಮಗಾರಿಯ ಪ್ರಗತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಸೋಣಂಗೇರಿಯಲ್ಲಿ ಪ್ರಯಾಣಿಕರಿಗೆ ಬಸ್ ಸ್ಟಾಂಡ್ ನಿರ್ಮಿಸಲು ಸ್ಥಳವನ್ನು ವೀಕ್ಷಿಸಿ ಆದಷ್ಟು ಬೇಗ ಸಾರ್ವಜನಿಕರಿಗೆ ಲಭ್ಯವಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.