ಸುಳ್ಯ:ಯೋಗ ಪಟು ಸೋನಾ ಅಡ್ಕಾರ್ ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಾಗಮಂಗಲ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ನಡೆಸಿದ 2025- 26ನೇ ಸಾಲಿನ ರಾಜ್ಯಮಟ್ಟದ 14 ವಯೋಮಿತಿಯ ಬಾಲಕಿಯರ ವಿಭಾಗದ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ
ಪ್ರಥಮ ಸ್ಥಾನ ಪಡೆದು ಚಿನ್ನದ ಪದಕದೊಂದಿಗೆ ಸೋನ ರಾಷ್ಟ್ರಮಟ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುಂದೆ
ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸುವ
ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾದ ಸೋನಾ ಅಡ್ಕಾರ್ ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್ ಅಡ್ಕಾರ್ ಅವರ ಪುತ್ರಿ. ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು ಇಲ್ಲಿಯ ಗುರುಗಳಾದ ನವೀನ್ ಕುಮಾರ್ ಕಡೂರು ಯೋಗ ತರಬೇತಿ ನೀಡಿದ್ದಾರೆ.





