ಸುಳ್ಯ:ಪಿ.ಎಂ.ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಕುರಿತಾಗಿ ವಿದ್ಯುತ್ ಗ್ರಾಹಕರಿಗೆ ಮಾಹಿತಿ ನೀಡಲು ಹಾಗೂ ಸ್ಥಳದಲ್ಲೇ ಅರ್ಜಿ ನೋಂದಾಯಿಸಲು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ಅ.14ರಿಂದ 16ರ ತನಕ ಸೇವಾ ಸೇತು ಎಂಬ ಕಾರ್ಯಕ್ರಮ ಆರಂಭಗೊಂಡಿದೆ. ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ನಡೆದ
ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಜಿಲ್ಲಾ
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಸಮಿತಿ ಅಧ್ಯಕ್ಷ ಪಿ.ಎಸ್.ಗಂಗಾಧರ, ಪ್ರಮುಖರಾದ ಸುಧಾಕರ ರೈ, ಅಶೋಕ್ ಪ್ರಭು, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್, ಸಹಾಯಕ ಇಂಜಿನಿಯರ್ ಸುಪ್ರೀತ್, ಸಹಾಯಕ ಲೆಕ್ಕಾಧಿಕಾರಿ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.ಇದು ಮನೆಗಳ ಮೇಲ್ಚಾವಣಿಯಲ್ಲಿ ಸೌರ ವಿದ್ಯುತ್ ವ್ಯವಸ್ಥೆ ಅಳವಡಿಸಲು ಪ್ರೋತ್ಸಾಹಿಸುವ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಸೇವಾ ಸೇತು ಕಾರ್ಯಕ್ರಮ ನಡೆಸಲಾಗಿತ್ತು.










