ಉಡುಪಿ: ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಇಂದು ತಮ್ಮ ಪತ್ನಿ ಜತೆಗೆ ಉಡುಪಿಗೆ ಆಗಮಿಸಿದರು. ಪತ್ನಿ ದೇವಿಶಾ ಶೆಟ್ಟಿ ಜತೆ ಉಡುಪಿಯಲ್ಲಿರುವ ಕಾಪುವಿನ ಮಾರಿಗುಡಿ ದೇವಾಲಯಕ್ಕೆ ಭೇಟಿ ಕೊಟ್ಟ ಸೂರ್ಯಕುಮಾರ್ ಯಾದವ್, ವಿಶ್ವಕಪ್ ಗೆದ್ದ ಬೆನ್ನಲ್ಲೇ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸೂರ್ಯ ಅವರ
ಪತ್ನಿ ಮೂಲತಃ ಮಂಗಳೂರಿನವರಾಗಿದ್ದು, ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದಾರೆ. ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಮೊದಲು ಸ್ನೇಹಿತರಾಗಿ ನಂತರ ಪ್ರೀತಿಗೆ ಜಾರಿದವರು. ಇದೀಗ ದೇವಸ್ಥಾನಕ್ಕೆ ಭೇಟಿ ಕೊಟ್ಟು, ಸ್ಥಳೀಯರನ್ನು ಮಾತನಾಡಿಸಿದ್ದಾರೆ.
ವಿಶ್ವಕಪ್ ಹೀರೋ ಸೂರ್ಯಕುಮಾರ್ರನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬಹುದು ಎಂಬ ನಿರೀಕ್ಷೆಯಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.ಕಾಪು ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ದಂಪತಿಯನ್ನು ದೇವಳದ ಆಡಳಿತ ಮಂಡಳಿ ಸನ್ಮಾನಿಸಿದರು.