ಕೋಲ್ಕತ್ತ:ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಟಿ20 ತಂಡದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಮಗದೊಮ್ಮೆ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.ಗುಜರಾತ್ ವಿರುದ್ಧ ನಡೆದ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ
ಮುಂಬೈ ತಂಡವು ಐದು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.ಮೊದಲು ಬ್ಯಾಟಿಂಗ್ ನಡೆಸಿದ ಗುಜರಾತ್ 19.2 ಓವರ್ಗಳಲ್ಲಿ 197 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು.ಈ ಗುರಿ ಬೆನ್ನಟ್ಟಿದ ಮುಂಬೈ 15.4 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ ತಲುಪಿತು.ಸೂರ್ಯಕುಮಾರ್ ಯಾದವ್ ಕೇವಲ 29 ಎಸೆತಗಳಲ್ಲಿ 82 ರನ್ ಗಳಿಸಿ ಅಬ್ಬರಿಸಿದರು. ಅವರ ಇನಿಂಗ್ಸ್ನಲ್ಲಿ ಏಳು ಸಿಕ್ಸರ್ ಹಾಗೂ ಒಂಬತ್ತು ಬೌಂಡರಿಗಳು ಸೇರಿದ್ದವು.ಸರ್ಫರಾಜ್ ಖಾನ್ 17 ಎಸೆತಗಳಲ್ಲಿ 40 ರನ್ ಗಳಿಸಿ ಔಟಾಗದೆ ಉಳಿದರು.ಇದಕ್ಕೂ ಮುನ್ನ
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 21 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್ ಸಹಿತ ಅಜೇಯ 60 ರನ್ ಸಿಡಿಸುವ ಮೂಲಕ ಮುಂಬೈ ತಂಡಕ್ಕೆ ಏಳು ವಿಕೆಟ್ಗಳ ಗೆಲುವು ತಂದುಕೊಟ್ಟಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ಗಳಲ್ಲಿ 172 ರನ್ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಕೇವಲ 13.1 ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 174 ರನ್ ಗಳಿಸಿ ಗೆಲುವಿನ ನಗೆ ಬೀರಿತು.ಮುಂಬೈ ಪರ ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅವರು ಕೇವಲ 21 ಎಸೆತಗಳಲ್ಲಿ ಅಜೇಯ 60 ರನ್ ಸಿಡಿಸಿದರು. ವಿಶೇಷವಾಗಿ ಅವರು ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.














