ಮಂಗಳೂರು: ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಮಂಗಳೂರಿಗೆ ಆಗಮಿಸಿದ್ದರು.
ಸೂರ್ಯಕುಮಾರ್ ಹಾಗೂ ಪತ್ನಿ ದೀವಿಶಾ ಶೆಟ್ಟಿ ಮಂಗಳೂರಿಗೆ ಆಗಮಿಸಿದ್ದರು.ದಿವಿಶಾ ಶೆಟ್ಟಿ ಅವರು
ಕರಾವಳಿ ಮೂಲದವರಾಗಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ದಂಪತಿ ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಜೋಡಿ ಜು.7ರಂದು ಎಂಟನೇ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ‘ಪ್ರಣಾಮ್’ ತಂಡದವರು ದಂಪತಿ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದರು.ಮೊನ್ನೆ ತಾನೆ ನಡೆದ ಟಿ20 ವಿಶ್ವಕಪ್ ಫೈನಲ್ನಲ್ಲಿ ಕೊನೆಯ ಓವರ್ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಸೂರ್ಯ ಟೀಂ ಇಂಡಿಯಾ ಚಾಂಪಿಯನ್ ಆಗಲು ನಿರ್ಣಾಯಕ ಪಾತ್ರ ವಹಿಸಿದ್ದರು