ಲಂಡನ್: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸ್ಫೋಟಕ ಶತಕ ಸಿಡಿಸಿ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದ್ದ ವೈಭವ್ ಸೂರ್ಯವಂಶಿ ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದ್ದಾರೆ.ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ಕ್ರಿಕೆಟ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ.52 ಎಸೆಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಇದರೊಂದಿಗೆ
ಯೂತ್ ಏಕದಿನ ಕ್ರಿಕೆಟ್ನಲ್ಲಿ ವೇಗದ ಶತಕ ಸಿಡಿಸಿದ ಆಟಗಾರ ಎಂದೆನಿಸಿದ್ದಾರೆ. ಜತೆಗೆ ಯೂತ್ ಏಕದಿನ ಟೂರ್ನಿಯಲ್ಲಿ ವೇಗದ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
4ನೇ ಏಕದಿನ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅವರು, 10 ಬೌಂಡರಿ, 7 ಸಿಕ್ಸರ್ ಸಹಾಯದಿಂದ 100 ರನ್ಗಳ ಗಡಿ ಮುಟ್ಟಿದರು. ಈ ಮೂಲಕ ಅವರು ಯೂತ್ ಏಕದಿನ ಕ್ರಿಕೆಟ್ನಲ್ಲಿ ವೇಗವಾಗಿ ಶತಕ ಬಾರಿಸಿದ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.
ಇದಕ್ಕೂ ಮೊದಲು ಈ ದಾಖಲೆ ಪಾಕಿಸ್ತಾನದ ಕಮ್ರಾಮ್ ಗುಲಾಮ್ ಅವರ ಹೆಸರಿನಲ್ಲಿತ್ತು. ಅವರು 53 ಎಸೆತಗಳಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದರು.ಭಾರತದ ಪರ ವಿಹಾನ್ ಮಲ್ಹೋತ್ರಾ ಅವರು ಶತಕ ಸಿಡಿಸಿದ್ದಾರೆ. 121 ಎಸೆತಗಳಲ್ಲಿ 15 ಬೌಂಡರಿ ಹಾಗೂ 3 ಸಿಕ್ಸರ್ಗಳೊಂದಿಗೆ 129 ರನ್ ಕಲೆಹಾಕಿದ್ದಾರೆ. 50 ಓವರ್ಗಳಲ್ಲಿ ಭಾರತ 19ರೊಳಗಿನ ತಂಡವು 363 ರನ್ ಕಲೆಹಾಕಿತು.
ಭಾರತದ 364 ರನ್ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ನ 19ರೊಳಗಿನ ತಂಡವು 45.3 ಓವರ್ಗಳಲ್ಲಿ 308 ರನ್ ಗಳಿಸಿ 55 ರನ್ಗಳಿಂದ ಸೋಲೊಪ್ಪಿಕೊಂಡಿತು.