ಸುಳ್ಯ: ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ದೇಶದಾದ್ಯಂತ ನಡೆಯುತ್ತಿರುವ ಶೌರ್ಯ ಜಾಗರಣ ರಥ ಯಾತ್ರೆ ಅ.6 ರಂದು ಸುಳ್ಯಕ್ಕೆ ಆಗಮಿಸಲಿದೆ. ಇದರ ಅಂಗವಾಗಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ
ಬೃಹತ್ ಹಿಂದೂ ಶೌರ್ಯ ಸಂಗಮ ನಡೆಯಲಿದೆ. ಸೆ.25ರಂದು ಚಿತ್ರದುರ್ಗದಿಂದ ಹೊರಟ ರಥಯಾತ್ರೆಯು ಅ.10ರಂದು ಉಡುಪಿಯಲ್ಲಿ ಸಮಾಪನಗೊಳ್ಳಲಿದೆ. ಅ.6 ರಂದು ಸಂಜೆ 5 ಗಂಟೆಗೆ ಸಂಪಾಜೆಯ ಮೂಲಕ ಸುಳ್ಯ ಪ್ರವೇಶಿಸಲಿದೆ. ರಥವನ್ನು ಸಂಪಾಜೆಯಲ್ಲಿ ಭವ್ಯವಾಗಿ ಸ್ವಾಗತಿಸಿ ವಾಹನ ಜಾಥಾದ ಮುಖಾಂತರ ಕರೆತಂದು ಸಂಜೆ 5.30ಕ್ಕೆ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಶೌರ್ಯ ಸಂಗಮ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಘು ಜಿ. ಸಕಲೇಶಪುರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಶೌರ್ಯ ರಥಯಾತ್ರೆ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ,ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸಾದ್, ಮಂಗಳೂರು ವಿಭಾಗ ಸಂಯೋಜಕ ಭುಜಂಗ ಕುಲಾಲ್ ಉಪಸ್ಥಿತರಿರುವರು ಎಂದು ಎಂದು ಶೌರ್ಯ ರಥಯಾತ್ರೆ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.