ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಸುಳ್ಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ಸಭೆ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೇಂದ್ರ
ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ ಅಮೆಚೂರು ವಹಿಸಿದ್ದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ತುರ್ತು ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು. ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ದ.ಕ ಜಿಲ್ಲೆ-2 ನಿರ್ದೇಶಕ ಪ್ರವೀಣ್ ಕುಮಾರ್, ಸುಳ್ಯ ತಾಲೂಕು ಯೋಜನಾಧಿಕಾತಿ ನಾಗೇಶ್ ಪಿ. ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಮಹೇಶ್ ಕುಮಾರ್ ರೈ ಮೇನಾಲ,ವಿಪತ್ತು ನಿರ್ವಹಣಾ ಘಟಕದ ಯೋಜನಾಧಿಕಾರಿ ಜೈವಂತ ಪಟೆಗಾರ ಉಪಸ್ಥಿತರಿದ್ದರು.