ಲಕ್ನೋ :ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯ ವಿರುದ್ಧ ದಕ್ಷಿಣ ಆಫ್ರಿಕಾ 134 ರನ್ಗಳ ಭರ್ಜರಿ ಜಯ ದಾಖಲಿಸಿದೆ. ಗೆಲುವಿಗೆ 312 ರನ್ ಗುರಿ ಪಡೆದ ಆಸ್ಟ್ರೇಲಿಯಾ 40.5 ಓವರ್ಗಳಲ್ಲಿ 177 ರನ್ ಗಳಿಗೆ ಆಲೌಟ್ ಆಯಿತು. ದಕ್ಷಿಣ ಆಫ್ರಿಕಾದ ಬಿಗು ಬೌಲಿಂಗ್ ಹಾಗೂ ಫೀಲ್ಡಿಂಗ್ ಮುಂದೆ ನಿರಂತರ ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ
73 ರನ್ಗೆ ಪ್ರಮುಖ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸ್ಟ್ರೇಲಿಯಾ ಪರ 46 ರನ್ ಗಳಿಸಿದ ಮಾರ್ನೂಸ್ ಲಾಬುಶೇನ್ ಸ್ವಲ್ಪ ಮಟ್ಟಿಗೆ ಚೇತರಿಕೆ ನೀಡಿದರು.ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ದಕ್ಷಿಣ ಆಫ್ರಿಕಾ ತಂಡ ಆರಂಭಿಕ ಬ್ಯಾಟರ್ ಕ್ವಿಂಟನ್ ಡಿಕಾಕ್ (109) ಗಳಿಸಿದ ಶತಕ ಹಾಗೂ ಏಡಿನ್ ಮಾರ್ಕ್ರಂ (56) ಬಾರಿಸಿದ ಅರ್ಧಶತಕದ ಬಲದಿಂದ ನಿಗದಿತ 50 ಓವರ್ಗಳಲ್ಲಿ 311 ರನ್ ಗಳಿಸಿತು. ಆಸ್ಟ್ರೇಲಿಯಾ ಟೂರ್ನಿಯಲ್ಲಿ ಸತತ ಎರಡನೇ ಸೋಲು ಅನುಭವಿಸಿತು. ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ 6 ವಿಕೆಟ್ ಅಂತರದಿಂದ ಮಣಿದಿತ್ತು. ಇನ್ನೊಂದೆಡೆ ದಕ್ಷಿಣ ಆಫ್ರಿಕಾ ತಂಡ ಆಡಿದ ಎರಡೂ ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.