ಗೆಬರ್ಹಾ: ವರುಣ ಚಕ್ರವರ್ತಿ ಐದು ವಿಕೆಟ್ ಗೊಂಚಲು ಗಳಿಸಿ ಮಿಂಚಿದರೂ ಎರಡನೇ ಟಿ20 ಪಂದ್ಯದಲ್ಲಿ ಭಾರತಕ್ಕೆ ಸೋಲು.
ಭಾರತ ತಂಡವು ಒಡ್ಡಿದ್ದ 124 ರನ್ಗಳ ಗುರಿಯನ್ನು ಬೆನ್ನಟ್ಟಿದ ಆತಿಥೇಯ ದಕ್ಷಿಣ ಆಫ್ರಿಕಾ ತಂಡವು 3 ವಿಕೆಟ್ಗಳ ರೋಚಕ ಜಯಗಳಿಸಿತು. ಮೂರು ಪಂದ್ಯಗಳ ಸರಣಿಯಲ್ಲಿ 1–1ರ ಸಮಬಲ ಸಾಧಿಸಿತು. ಸ್ಪಿನ್ನರ್ ವರುಣ್ ಚಕ್ರವರ್ತಿ (17ಕ್ಕೆ5) ದಾಳಿಗೆ ಕುಸಿದು ಒಂದು
ಹಂತದಲ್ಲಿ ಸೋಲಿನ ಭೀತಿ ಎದುರಿಸಿತ್ತು.. ಯುವ ಬ್ಯಾಟರ್ ಸ್ಟಬ್ಸ್ (ಔಟಾಗದೆ 47; 41ಎ, 4X7) ನಿರೀಕ್ಷೆ ಹುಸಿಗೊಳಿಸಲಿಲ್ಲ. ಅವರಿಗೆ ಗೆರಾಲ್ಡ್ (ಔಟಾಗದೆ 19, 9ಎ, 4X2, 6X1) ಉತ್ತಮ ಆಟದ ಬಲದಿಂದ ದಕ್ಷಿಣ ಆಫ್ರಿಕಾ ತಂಡವು ಗೆಲುವಿನ ನಗೆ ಬೀರಿತು.
ವರುಣ ಸ್ಪಿನ್ ದಾಳಿಯಿಂದಾಗಿ ಆತಿಥೇಯ ತಂಡವು 15.4 ಓವರ್ಗಳಲ್ಲಿ 86 ರನ್ಗಳಿಗೆ 7 ವಿಕೆಟ್ ಕಳೆದುಕೊಂಡಿತು. ಸ್ಟಬ್ಸ್ ಮತ್ತು ಗೆರಾಲ್ಡ್ ಮುರಿಯದ 8ನೇ ವಿಕೆಟ್ ಜೊತೆಯಾಟದಲ್ಲಿ 42 ರನ್ ಸೇರಿಸಿದರು. ಇದರೊಂದಿಗೆ ಭಾರತದ ಬೌಲರ್ಗಳ ದಿಟ್ಟ ಹೋರಾಟಕ್ಕೆ ತೆರೆಬಿತ್ತು. ದಕ್ಷಿಣ ಆಫ್ರಿಕಾ ತಂಡವು 19 ಓವರ್ಗಳಲ್ಲಿ 7 ವಿಕೆಟ್ಗಳಿಗೆ 128 ರನ್ ಗಳಿಸಿ ಗೆದ್ದಿತು.
ಈ ಸರಣಿಯ ಮೊದಲ ಪಂದ್ಯದಲ್ಲಿ ಮಿಂಚಿದ್ದ ಭಾರತದ ಅಗ್ರಕ್ರಮಾಂಕದ ಬ್ಯಾಟರ್ಗಳು ಇಲ್ಲಿ ವಿಫಲರಾದರು. ಅದರಿಂದಾಗಿ ಭಾರತ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳಿಗೆ 124 ರನ್ಗಳ ಸಾಧಾರಣ ಮೊತ್ತ ಗಳಿಸಿತು. ಟಾಸ್ ಗೆದ್ದ ಆತಿಥೇಯ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.
ಸರಣಿಯ ಮೊದಲ ಪಂದ್ಯದಲ್ಲಿ ಅಬ್ಬರದ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್ ಅವರನ್ನು ಮೊದಲ ಓವರ್ನಲ್ಲಿಯೇ ಮಾರ್ಕೊ ಯಾನ್ಸೆನ್ ಕ್ಲೀನ್ಬೌಲ್ಡ್ ಮಾಡಿದರು. ಅಭಿಷೇಕ್ ಶರ್ಮಾ, ನಾಯಕ ಸೂರ್ಯಕುಮಾರ್ ಯಾದವ್ ತಲಾ 4 ರನ್ ಗಳಿಸಿ ನಿರ್ಗಮಿಸಿದರು. ತಿಲಕ್ ವರ್ಮಾ (20; 20ಎ) ಮತ್ತು ಅಕ್ಷರ್ ಪಟೇಲ್ (27; 21ಎ) ಚೇತರಿಕೆ ನೀಡುವ ಪ್ರಯತ್ನ ಮಾಡಿದರು. ಹಾರ್ದಿಕ್ ಪಾಂಡ್ಯ ಅವರು 45ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿದರು. 1 ಸಿಕ್ಸರ್ ಮತ್ತು 4 ಬೌಂಡರಿ ಇದ್ದವು.