ಪುಣೆ:ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ದಕ್ಷಿಣ ಆಫ್ರಿಕಾ 190 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಗೆಲುವಿಗೆ 358 ರನ್ ಗುರಿ ಬೆನ್ನಟ್ಟಿದ ನ್ಯೂಝಿಲೆಂಡ್ 35.3 ಓವರ್ಗಳಲ್ಲಿ167 ರನ್ಗೆ ಆಲ್ ಔಟ್ ಆಯಿತು. ದಕ್ಷಿಣ ಆಫ್ರಿಕಾದ ಸ್ಪಿನ್ ದಾಳಿಗೆ ಸಿಲುಕಿದ ನ್ಯೂಝಿಲೆಂಡ್ಗೆ ನಿರಂತರ
ವಿಕೆಟ್ ಉರುಳಿತು. ಗ್ಲೆನ್ ಫಿಲಿಫ್ 60, ವಿಲ್ ಯಂಗ್ 33, ಡ್ಯಾರಿಲ್ ಮಿಚ್ಚೆಲ್ 24 ರನ್ ಗಳಿಸಿ ಅಲ್ಪ ಪ್ರತಿರೋಧ ತೋರಿದರು. ದಕ್ಷಿಣ ಆಫ್ರಿಕಾ ಪರ ಸ್ಪಿನ್ನರ್ ಕೇಶವ ಮಹಾರಾಜ 4 ವಿಕೆಟ್ ಉರುಳಿಸಿದರು. ಮಾರ್ಕೋ ಜಾನ್ಸನ್ 3, ಜೆರಾಲ್ಡ್ ಕೊಯೆಸ್ಟಿ 2 ವಿಕೆಟ್ ಪಡೆದರು.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ ಹಾಗೂ ರಾಸ್ಸಿ ವಾನ್ ಡರ್ ಡುಸ್ಸೆಸ್ ಸಿಡಿಸಿದ ಆಕರ್ಷಕ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿತು. ಆರಂಭಿಕ ಬ್ಯಾಟರ್ ಕ್ವಿಂಟನ್ ಡಿಕಾಕ್ 116 ಎಸೆತಗಳಲ್ಲಿ 10 ಬೌಂಡರಿ 3 ಸಿಕ್ಸರ್ ಸಹಿತ 114ರನ್ ಬಾರಿಸಿ ದ್ದಾರೆ.ವಾನ್ ಡರ್ ಡುಸ್ಸೆಸ್ 118 ಎಸೆತಗಳಲ್ಲಿ 9 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 133 ರನ್ ರನ್ ಬಾರಿಸಿದರು. ಇವರಿಬ್ಬರೂ ಎರಡನೇ ವಿಕೆಟ್ಗೆ 200 ರನ್ ಜೊತೆಯಾಟ ನೀಡಿದರು. ಡೇವಿಡ್ ಮಿಲ್ಲರ್ 30 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 53 ರನ್ ಬಾರಿಸಿದರು.
ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಿತು.ಹ್ಯಾಟ್ರಿಕ್ ಸೋಲು ಅನುಭವಿಸಿದ ನ್ಯೂಝಿಲ್ಯಾಂಡ್ ತಂಡ ಸೆಮೀಸ್ ಗೆ ಏರಬೇಕಾದರೆ ಮುಂದಿನ ಪಂದ್ಯ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ.