ಪುಣೆ:ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಬ್ಯಾಟರ್ಗಳಾದ ಕ್ವಿಂಟನ್ ಡಿಕಾಕ್ ಹಾಗೂ ರಾಸ್ಸಿ ವಾನ್ ಡರ್ ಡುಸ್ಸೆಸ್ ಸಿಡಿಸಿದ ಆಕರ್ಷಕ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ನ್ಯೂಝಿಲ್ಯಾಂಡ್ ವಿರುದ್ಧ ಬೃಹತ್ ಮೊತ್ತ ಪೇರಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ
357 ರನ್ ಗಳಿಸಿದೆ. ಆರಂಭಿಕ ಬ್ಯಾಟರ್ ಕ್ವಿಂಟನ್ ಡಿಕಾಕ್ 116 ಎಸೆತಗಳಲ್ಲಿ 10 ಬೌಂಡರಿ 3 ಸಿಕ್ಸರ್ ಸಹಿತ 114ರನ್ ಬಾರಿಸಿ ದ್ದಾರೆ.ವಾನ್ ಡರದ ಡುಸ್ಸೆಸ್ 118 ಎಸೆತಗಳಲ್ಲಿ 9 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 133 ರನ್ ರನ್ ಬಾರಿಸಿದರು. ಇವರಿಬ್ಬರೂ ಎರಡನೇ ವಿಕೆಟ್ಗೆ 200 ರನ್ ಜೊತೆಯಾಟ ನೀಡಿದರು. ಡೇವಿಡ್ ಮಿಲ್ಲರ್ 30 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 53 ರನ್ ಬಾರಿಸಿದರು.
ಈ ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಡಿಕಾಕ್ ಆಡಿದ 7 ಪಂದ್ಯಗಳಲ್ಲಿ ನಾಲ್ಕನೇ ಶತಕ ಸಿಡಿಸಿದರು.ಈ ವಿಶ್ವಕಪ್ನಲ್ಲಿ
ಅತೀ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಡಿಕಾಕ್ 7 ಪಂದ್ಯಗಳಿಂದ 87.50 ಸರಾಸರಿಯಲ್ಲಿ 532 ರನ್ ಬಾರಿಸಿದ್ದಾರೆ. ರಸ್ಸಿ ವಾನ್ ಡರ್ ಡುಸ್ಸನ್ ಈ ವಿಶ್ವಕಪ್ನಲ್ಲಿ ಎರಡನೇ ಶತಕ ದಾಖಲಿಸಿದ್ದಾರೆ