ಸುಳ್ಯ:ಬಂಟ್ವಾಳದ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ ಹಾಗೂ ದ.ಕ.ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆಯ ನಿರಂತರ ವೈಫಲ್ಯವನ್ನು ಖಂಡಿಸಿ ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರ ಸಭೆಯಲ್ಲಿ ಕೆ.ಪಿ.ಸಿ.ಸಿ.ವಕ್ತಾರ ಸ್ಥಾನಕ್ಕೆ ಶೌವಾದ್ ಗೂನಡ್ಕ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.ರಾಜ್ಯ ಸರ್ಕಾರವು
ದ.ಕ.ಜಿಲ್ಲೆಯ ಶಾಂತಿ, ಸುವ್ಯವಸ್ಥೆಗೆ ವಿಶೇಷ ಆದ್ಯತೆಯನ್ನು ನೀಡಿ ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ಹತ್ಯೆಯಾದ ಅಮಾಯಕ ವ್ಯಕ್ತಿ ಅಬ್ದುಲ್ ರಹ್ಮಾನ್ ಕುಟುಂಬಸ್ಥರಿಗೆ ಗರಿಷ್ಠ ಪ್ರಮಾಣದ ಪರಿಹಾರ ನೀಡಬೇಕು ಹಾಗೂ ಈ ಹಿಂದಿನ ಕೋಮು ಹತ್ಯೆ ಪ್ರಕರಣಗಳಲ್ಲಿ ಭಾಗಿಯಾದ ದುಷ್ಕರ್ಮಿಗಳ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳುವವರೆಗೆ ಕಾಂಗ್ರೆಸ್ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲವೆಂದು ಶೌವಾದ್ ಗೂನಡ್ಕ ತಿಳಿಸಿದ್ದಾರೆ.