ಸುಳ್ಯ: ಕಾಂಗ್ರೆಸ್ ಪಕ್ಷವು ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಖಂಡಿತವಾಗಿಯೂ ಜಾರಿಗೆ ಬರುತ್ತದೆ ಅದರ ಬಗ್ಗೆ ಯಾರಿಗೂ ಸಂಶಯ ಬೇಡ ಬಿ.ಜೆ.ಪಿ.ಪಕ್ಷವು ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ, ಎಂದು ಕೆ.ಪಿ.ಸಿ.ಸಿ.ವಕ್ತಾರ ಶೌವಾದ್ ಗೂನಡ್ಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯೋಜನೆಗಳನ್ನು ಜಾರಿಗೊಳಿಸುವ ವೇಳೆ ಆರ್ಥಿಕ ಸ್ಥಿತಿಗತಿಗಳನ್ನು ಅವಲೋಕಿಸುವುದು ಅತ್ಯಗತ್ಯ, ಇದಕ್ಕೆ ಕೆಲವು ದಿನಗಳು ಬೇಕಾಗುತ್ತದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಈ ಹಿಂದೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
previous post