ಬೆಂಗಳೂರು: ಜಿ.ಎಸ್.ಪಾಟೀಲ ಅವರು ವಿಧಾನಸಭಾ ಅಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಮತ್ತು ವಿಧಾನಸಭಾ ಅಧ್ಯಕ್ಷರಾಗಿ
ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್) ಅವರನ್ನು
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಸ್ಪೀಕರ್ ಸ್ಥಾನಕ್ಕೆ ಸೂಚಿಸಿದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅನುಮೋದಿಸಿದರು. ಸ್ಪೀಕರ್ ಸ್ಥಾನಕ್ಕೆ ಜಿ.ಎಸ್.ಪಾಟೀಲ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಸರ್ವಾನುಮತದಿಂದ ಆಯ್ಕೆಯಾದರು.
ಹಂಗಾಮಿ ಸ್ಪೀಕರ್ ಟಿ.ಬಿ.ಜಯಚಂದ್ರ ಅವರ ಆದೇಶ ಅನುಸಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸ್ಪೀಕರ್ ಪೀಠದ ಬಳಿಗೆ ಜಿ.ಎಸ್.ಪಾಟೀಲ್ ಅವರನ್ನು ಕರೆತಂದರು. ರೋಣ ನಾಲ್ಕು ಬಾರಿ ಗೆಲುವು ಕಂಡಿರುವ ಪಾಟೀಲರು ರಾಜಕಾರಣದಲ್ಲಿ ಹಲವು ಏಳು ಬೀಳುಗಳನ್ನು ಕಂಡಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್ ಅವರು ಆಯ್ಕೆಯಾಗಿದರು.ಧ್ವನಿಮತದ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಲೀಂ ಅಹ್ಮದ್ ಪರವಾಗಿ 38 ಮತಗಳು ಚಲಾವಣೆಯಾದರೆ, ಪಿ.ಎಚ್.ಪೂಜಾರ್ ಪರವಾಗಿ 30 ಮತಗಳು ಚಲಾವಣೆಯಾದವು.ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಸಲೀಂ ಅಹ್ಮದ್ ಹಾಗೂ ಮೈತ್ರಿಕೂಟದಿಂದ ಬಿಜೆಪಿಯ ಪಿ.ಎಚ್.ಪೂಜಾರ್ ಕಣದಲ್ಲಿದ್ದರು.





































