ಬೇಕಲ: ಕರ್ನಾಟಕ ಅರೆ ಭಾಷೆ,ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕಗೊಂಡ ಸದಾನಂದ ಮಾವಜಿ ಅವರನ್ನು ಮತ್ತು ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ ನಾಮ ನಿರ್ದೇಶನಗೊಂಡ
ಸಿದ್ದೀಕ್ ಕೊಕೊ, ಕೆ.ರಾಜು ಪಂಡಿತ್ ಹಾಗೂ ಭಾಸ್ಕರ ಪೂಜಾರಿಯವರನ್ನು ವಿಧಾನ ಸಭಾ ಸ್ಪೀಕರ್ ಯು ಟಿ ಖಾದರ್ ಕಾಸರಗೋಡಿನ ಬೇಕಲದಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್, ಕೆ ಟಿ ವಿಶ್ವನಾಥ್ ಮೊದಲಾದವರು ಉಪಸ್ಥಿತರಿದ್ದರು. ಬೇಕಲದಲ್ಲಿ ಸ್ಪೀಕರ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಸನ್ಮಾನಿಸಿ ಅಭಿನಂದಿಸಿದರು.









