ಸುಳ್ಯ:ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಎಂ.ಬಿ.ಫೌಂಡೇಶನ್ ಸುಳ್ಯ ಹಾಗೂ ಲಯನ್ಸ್ ಕ್ಲಬ್ ಸುಳ್ಯ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಶಾಲೆಗಳಲ್ಲಿ ಸೇವಾ ನಿರತರಾಗಿರುವ ವಿಶೇಷ ಶಿಕ್ಷಕರ ದಿನಾಚರಣೆ ಸುಳ್ಯದ ಸಾಂದೀಪ್ ವಿಶೇಷ ಶಾಲೆಯಲ್ಲಿ ಜರುಗಿತು. ಲಯನ್ಸ್ ಸೇವಾ ಸದನದಲ್ಲಿ ನಡೆದ ಕಾರ್ಯಕ್ರಮವನ್ನು
ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ಬೆಂಗಳೂರಿನ ಫಾರ್ಮೆಡ್ ಗ್ರೂಪ್ ಆಫ್ ಕಂಪೆನಿಯ ಹಿರಿಯ ಉಪಾಧ್ಯಕ್ಷ ಉಮ್ಮರ್ ಬೀಜದಕಟ್ಟೆ ಶಿಖರೋಪನ್ಯಾಸ ನೀಡಿದರು. ಎಂ.ಬಿ.ಫೌಂಡೇಶನ್ನ ಅಧ್ಯಕ್ಷ ಎಂ.ಬಿ.ಸದಾಶಿವ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್ ಶೆಟ್ಟಿ, ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್, ಸಿಡಿಪಿಒ ಶೈಲಜಾ ದಿನೇಶ್ ಕುಕ್ಕುಜಡ್ಕ, ಜಿಲ್ಲಾ ಲಯನ್ಸ್ ಸಂಯೋಜಕರಾದ ಸಂಜೀವ ಕತ್ಲಡ್ಕ, ದೇವಿಪ್ರಸಾದ್, ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ರೇಷ್ಮಾ ಮಾರ್ಟಿಸ್, ಸಾಂದೀಪ್ ವಿಶೇಷ ಶಾಲೆಯ ಸಂಚಾಲಕಿ ಹರಿಣಿ ಸದಾಶಿವ, ನಿರ್ದೇಶಕರಾದ ಶರೀಪ್ ಜಟ್ಟಿಪಳ್ಳ, ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು. ಶಾಸಕಿ ಭಾಗೀರಥಿ ಮುರುಳ್ಯ, ಉಮ್ಮರ್ ಬೀಜದಕಟ್ಟೆ, ಎಂ.ಬಿ.ಸದಾಶಿವ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಬಳಿಕ ವಿವಿಧ ಕಾರ್ಯಕ್ರಮಗಳು, ಸಾಂಸ್ಕೃತಿಕ ಸಂಭ್ರಮ ನಡೆಯಿತು.